ಕಾಪು: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಅವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು, ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಪ್ರದೀಪ್ ರಾವ್ ಶಕ್ತಿಕೇಂದ್ರ ಪ್ರಮುಖ್ ಶಶಿಪ್ರಭಾ ಶೆಟ್ಟಿ ಮತ್ತಿತರರು ಬರಮಾಡಿಕೊಂಡರು.

ಬಳಿಕ ಮಾತನಾಡಿದ ಕಾರ್ಯಕರ್ತರು, ಯಾವುದೇ ಸ್ಥಾನಮಾನದ ಅಪೇಕ್ಷೆ ಇಲ್ಲದೆ ಪ್ರಧಾನಿ ಮೋದಿಜಿಯವರ ಕಾರ್ಯವೈಖರಿಗೆ ಮನಸೋತು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದರು.

ಕಾಪುವಿನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು ಚುನಾವಣೆ ಸಂದರ್ಭದಲ್ಲಿ ‌ಮತ್ತಷ್ಟು ಜನ ವಿವಿಧ ಪಕ್ಷಗಳಿಂದ ಸೇರ್ಪಡೆಗೊಳ್ಳಲು ಕಾಯುತ್ತಿದ್ದು ಪ್ರಧಾನಿ ಮೋದಿಜಿಯವರ ಕಾರ್ಯವೈಖರಿ, ರಾಜ್ಯದ ಮುಖ್ಯ ಮಂತ್ರಿಗಳ ಜನಪರ ಕಾರ್ಯವೈಖರಿ ಹಾಗೂ ಸ್ಥಳೀಯ ಶಾಸಕರುಗಳ ಕಾರ್ಯವೈಖರಿಗೆ ಮೆಚ್ಚಿ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ನಮ್ಮ‌ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿದ್ದಾರೆ.