ಕಾಪು: ಪುರಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ

 

ಕಾಪು: ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಕಾಪು ಮಂಡಲ ವತಿಯಿಂದ ಬೃಹತ್ ಕಾರ್ಯಕರ್ತರ ಸಮಾವೇಶವು ಕಾಪು ಕೆ.ಒನ್. ಸಭಾಂಗಣದಲ್ಲಿ ಜರಗಿತು.

ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ವಿ. ಕುಮಾರ್ ರವರು ಮತ್ತು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ರವರು ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾಪು ಪುರಸಭಾ ಚುನಾವಣಾ ಸಂಚಾಲಕರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರು ಹಾಗೂ ಪುರಸಭಾ ಚುನಾವಣಾ ಸಹ ಸಂಚಾಲಕರಾದ ಕಿರಣ್ ಕೊಡ್ಗಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲಕೃಷ್ಣ ರಾವ್ ಮಟ್ಟು, ಪುರಸಭಾ ವ್ಯಾಪ್ತಿಯ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಕಲ್ಯಾ, ಕಾಪು ಪುರಸಭೆಯ ಬಿಜೆಪಿ ಬೆಂಬಲಿತ 23 ಅಭ್ಯರ್ಥಿಗಳು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಮತದಾರ ಭಾಂದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಮೆಚ್ಚಿಕೊಂಡು ಹಲವಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಪಕ್ಷದ ಮುಖಂಡರು ಅವರಿಗೆ ಪಕ್ಷದ ಶಾಲು ಹೊದಿಸಿ ಧ್ವಜವನ್ನು ನೀಡಿ ಸ್ವಾಗತಿಸಿದರು.