ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಇನ್ನಂಜೆ ಎಸ್.ವಿ.ಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್, ಉದಯ್ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಪ್ರಾಂಶುಪಾಲ ರಾಜೇಂದ್ರ ಪ್ರಭು ಹಾಗೂ ದೈಹಿಕ ಶಿಕ್ಷಕ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

















