ಉಡುಪಿ: ಟಿವಿಎಸ್ ದ್ವಿಚಕ್ರ ವಾಹನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ವಿದ್ಯಾನಿಕೇತನ ಶಾಲೆಯ ಬಳಿ ಶುಕ್ರವಾರ ಸಂಭವಿಸಿದೆ.
ಕಾಪುವಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಸವಾರನಿಗೆ ಕೇರಳದಿಂದ ಕೊಲ್ಲೂರು ಕಡೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋ ಡಿಕ್ಕಿ ಹೊಡೆದಿದೆ. ಇದರಿಂದ ಸವಾರ ಟಿವಿಎಸ್ ಸಮೇತ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.