ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕುತ್ಯಾರು ಗ್ರಾಮದ ನಿವಾಸಿ ಮಥಾಯಿ (64) ಎಂಬ ವ್ಯಕ್ತಿಯು ಫೆಬ್ರವರಿ 10 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಮಲಯಾಳಂ  ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಿರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.