ಕಾಪು ಯುವಮೋರ್ಚಾದಿಂದ ಸಚಿವ ಸುನಿಲ್ ಕುಮಾರ್ ಗೆ ಸನ್ಮಾನ

ಕಾಪು: ಇಂಧನ, ಕನ್ನಡ ಮತ್ತು ಸಂಸ್ಕೃತಿ‌ ಸಚಿವ ವಿ. ಸುನಿಲ್ ಕುಮಾರ್ ಅವರು ಕಾಪು ಬಿಜೆಪಿ ಕಚೇರಿಗೆ ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಅಧ್ಯಕ್ಷ ಸಚಿನ್ ಸುವರ್ಣ ಅವರ ನೇತೃತ್ವದಲ್ಲಿ ನೂತನ ಸಚಿವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್,  ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್  ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪದಾಧಿಕಾರಿಗಳು ವಿವಿಧ ಮೋರ್ಚ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.