udupixpress
Home Trending ಕರಾವಳಿಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ: ಉಡುಪಿಯಲ್ಲಿ ಆ್ಯರೆಂಜ್ ಅಲರ್ಟ್ ಘೋಷಣೆ

ಕರಾವಳಿಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ: ಉಡುಪಿಯಲ್ಲಿ ಆ್ಯರೆಂಜ್ ಅಲರ್ಟ್ ಘೋಷಣೆ

ಉಡುಪಿ: ಮುಂದಿನ ಐದು ದಿನಗಳ ಕಾಲ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ ಐದು ದಿನಗಳ ಕಾಲ ಆ್ಯರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಮುಂದಿನ ಐದು ದಿನಗಳ ಕಾಲ ಸುಮಾರು 115 ಮಿ.ಮೀ ಕ್ಕಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕೆಳ ಸೂಚನೆಗಳನ್ನು ನೀಡಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ನದಿ, ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಿದೆ.

error: Content is protected !!