ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಗಣೇಶ ಮೊಗವೀರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ.ಪಿ. ಮಾತನಾಡಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕ ಡಾ. ಮಂಜುನಾಥ ಗಾಣಿಗ, ಕಾರ್ಯದರ್ಶಿ ಹಾಗೂ ಜೀವಶಾಸ್ತ್ರ ಉಪನ್ಯಾಸಕ ಸುನಿಲ್ ಚಿತ್ತಾಲ್ , ಕೋಶಾಧಿಕಾರಿ ಹಾಗೂ ಭೌತಶಾಸ್ತ್ರ ಉಪನ್ಯಾಸಕ ಕಾರ್ತೀಕೇಯ ಎಮ್.ಎಸ್. ಆಡಳಿತಾಧಿಕಾರಿ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವಾರ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರು ಗಣೇಶ್ ಮೊಗವೀರ ಸ್ವಾಗತಿಸಿದರು, ವಾಣಿಜ್ಯಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳನ್ನು ಪರಿಚಯಿಸಿದರು, ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಹರ್ಷ ವಂದಿಸಿದರು.