ಕಾರ್ಕಳ: ಯುವಕನೊಬ್ಬ ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಎಂಬಲ್ಲಿ ನಡೆದಿದೆ.
ನಂದಳಿಕೆ ಗ್ರಾಮದ ನಿವಾಸಿ ರಾಜೇಂದ್ರ ಪ್ರಸಾದ್ (47) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಕಳೆದ 17ವರ್ಷಗಳಿಂದ ದುಬೈಯಲ್ಲಿ ಕೆಲಸ ಮಾಡಿಕೊಂಡಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು. ಕೋವಿಡ್-19 ನಿಂದಾಗಿ ಮತ್ತೆ ದುಬೈಗೆ ಹೋಗಲು ಆಗದೇ ಇದ್ದುದರಿಂದ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇದೇ ಕಾರಣದಿಂದ ಆ.17ರಂದು ಮನೆಯಿಂದ ಹೊರಗಡೆ ಹೋದವರು ಮತ್ತೆ ಮನೆಗೆ ಬಾರದೆ ಕಾಣೆಯಾಗಿದ್ದರು. ಆ.19 ಗುರುವಾರದಂದು ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.