ಕಾರ್ಕಳ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಕಾರ್ಕಳ: ಮಲ್ಲಿಗೆ ಗಿಡಕ್ಕೆ ಹಾಕುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಸೂಡ ಗ್ರಾಮದ ಕುದ್ರೆಬೆಟ್ಟು ನಿವಾಸಿ ಜೆಸಿಂತಾ ಪಿರೇರಾ ಅವರ ಮಗ ಜೋನ್ಸನ್ ಪಿರೇರಾ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ ಜೀವನದಲ್ಲಿ ಮನನೊಂದು ಡಿ. 18ರಂದು ಮಲ್ಲಿಗೆ ಗಿಡಕ್ಕೆ ಹಾಕುವ ಕೀಟನಾಶಕವನ್ನು ಸೇವಿಸಿದ್ದನು.

ಅಸ್ವಸ್ಥಗೊಂಡಿದ್ದ ಜೋನ್ಸನ್ ನನ್ನು ಮನೆಯವರು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಡಿ. 25ರಂದು ಜೋನ್ಸನ್ ಮೃತಪಟ್ಟಿದ್ದಾನೆ‌. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.