udupixpress
Home Trending ಕಾರ್ಕಳ: ಅನೈಸರ್ಗಿಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯ ಬಂಧನ

ಕಾರ್ಕಳ: ಅನೈಸರ್ಗಿಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯ ಬಂಧನ

ಉಡುಪಿ: ಅಪ್ರಾಪ್ತ ಬಾಲಕನಿಗೆ ಅನೈಸರ್ಗಿಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಸಚ್ಚರಿಪೇಟೆಯ ಇಬ್ರಾಹಿಂ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಕಾರಣ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕನ ಪೋಷಕರ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿವೈಎಸ್ ಪಿ ಭರತ್ ರೆಡ್ಡಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಮತ್ತು ಉಪ ನಿರೀಕ್ಷಕರಾದ ನಾಸಿರ್ ಹುಸೈನ್ ಮತ್ತು ದಿಲೀಪ್ ಒಳಗೊಂಡ ಕ್ರೈಂ ತಂಡ ಆರೋಪಿಯನ್ನು ಬಂಧಿಸಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಆಪ್ತಸಮಾಲೋಚನೆ ನಡೆಸಿ ಬಾಲಕನಿಗೆ ಮತ್ತು ಪೋಷಕರಿಗೆ ಆತ್ಮ ಸ್ಟೈರ್ಯ ನೀಡುವ ಮೂಲಕ ಶಿಕ್ಷಣ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.
error: Content is protected !!