ಕಾರ್ಕಳ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ, ಬೆಳುವಾಯಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಕೊಳಕೆ ಇರ್ವತ್ತೂರಿನ ಭಾಸ್ಕರ್ ಎಸ್. ಕೋಟ್ಯಾನ್ ಅವರು ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಸರಕಾರ ನ.14ರಂದು ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿದೆ.
ಸಹಕಾರಿ ಮಾತ್ರವಲ್ಲದೇ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಭಾಸ್ಕರ್ ಕೋಟ್ಯಾನ್, ವಿಶ್ವ ಹಿಂದೂ ಪರಿಷತ್ ಕಾರ್ಕಳ ಅಧ್ಯಕ್ಷರಾಗಿ, ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಆಡಳಿತ ಮೊಕ್ತಸರರಾಗಿ, ಮೂಡುಬಿದಿರೆ ಭಾರತ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ನವೋದಯ ವಿವಿದ್ದೋದ್ದೇಶ ಸೌದಾರ್ದ ಸಹಕಾರಿ ಮಂಗಳೂರು ಇದರ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕಂಬಳ ಕೋಣಗಳ ಯಜಮಾನರಾಗಿರುವ ಇವರು ರಾಜ್ಯ ಕಂಬಳ ಸಮಿತಿ ಸದಸ್ಯರಾಗಿ ಮತ್ತು ಜಿಲ್ಲಾ ಕಂಬಳ ಶಿಸ್ತು ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


















