ಕಾರ್ಕಳ: ನಿಂತಿದ್ದ ಮಹಿಳೆಗೆ ಕಾರು ಢಿಕ್ಕಿ; ಮಹಿಳೆ ಮೃತ್ಯು.

ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಿಟ್ಟೆ ಗ್ರಾಮದ ದೂಪದಕಟ್ಟೆಯಲ್ಲಿರುವ ಗುಲಾಬಿ ಹೋಟೆಲ್ ಮುಂಭಾಗದಲ್ಲಿ ಜೂ.15ರಂದು ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಸವಿತಾ ವೀಣಾ(59) ಎಂದು ಗುರುತಿಸ ಲಾಗಿದೆ. ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ಸವಿತಾ ಅವರಿಗೆ ಢಿಕ್ಕಿ ಹೊಡೆಯಿ ತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.