ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಕಾರ್ಕಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ಇಂದು ಮುಂಜಾನೆ ನಡೆದಿದೆ.

ಕಾರು ಚಾಲಕನನ್ನು ಫಾದರ್‌ ಮುಲ್ಲರ್‌ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತೋಡಿಗೆ ಬಿದ್ದ ಪರಿಣಾಮ ಕಾರಿನ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.