ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಛೇರಿ, ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟವು ಕಾರ್ಕಳ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು.
ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅವಿನಾಶ್ ಶೆಟ್ಟಿ ಅವರು ದೀಪ
ಬೆಳಗುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಮಕ್ಕಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಗೆ ಹೆಸರು ತರುವಂತಹ ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಪುರಸಭಾ ಸದಸ್ಯರಾದ ಶುಭದ್‌ರಾವ್ ಅವರು ಮಕ್ಕಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ಕಿಂಗ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಅವರು ಮಾತನಾಡಿ “ ಕ್ರೀಡೆಯಲ್ಲಿ ಭಾಗವಹಿಸುವುದೇ ಒಂದು ಹಂತದ ಗೆಲುವು ಪಡೆದ ಹಾಗೆ, ಎಲ್ಲಾ ಸ್ಪರ್ಧಾಳುಗಳು ಒಬ್ಬರಿಗೊಬ್ಬರು ಸ್ಪೂರ್ತಿಯಾಗುವಂತೆ ಸ್ಪರ್ಧಿಸಬೇಕು” ಎಂದು ಹೇಳಿದರು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ
ಪ್ರಸ್ತಾವನೆಗೈದರು. ಕ್ರೈಸ್ಟ್ಕಿಂಗ್ ಎಜುಕೇಷನ್ ಟ್ರಸ್ಟ್ನ
ಕಾರ್ಯದರ್ಶಿ ಆವೆಲಿನ್ ಲೂಯಿಸ್, ವಲಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಜ್ಯೋತಿ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಗದ ಅಧ್ಯಕ್ಷರಾದ ಪ್ರೌಢಶಾಲಾ ವಿಭಾಗದ ಶ್ರೀಮತಿ ಶರಿಟಾ ನೊರೊನ್ಹ, ಪ್ರಾಥಮಿಕ ವಿಭಾಗದ ಉದಯರವಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ನಾಯ್ಕ್ ಸ್ವಾಗತಿಸಿ ಶಿಕ್ಷಕಿ ಜೆಸ್ಲಿನ್ ಡಿ’ಸೋಜ ವಂದಿಸಿದರು.ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.












