ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಜನತಾ ಪ.ಪೂ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮ ಪ್ರಭು ಪ್ರಥಮ
ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇದೇ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಡಿಮೆಲ್ಲೊ ದ್ವಿತೀಯ, ಡೇನಿಕಾ ಕುಂದರ್ ತೃತೀಯ, ದ್ವಿತೀಯ ವಾಣಿಜ್ಯ ವಿಭಾಗದ ಅಪೂರ್ವ ತೃತೀಯ, ಪ್ರಥಮ ವಾಣಿಜ್ಯ ವಿಭಾಗದ ಸಾಚಿ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.












