ಕಾರ್ಕಳ: 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.
ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಿಎ ಫೌಂಡೇಶನ್ ನಲ್ಲಿ 13 ವಿದ್ಯಾರ್ಥಿಗಳಲ್ಲಿ 07 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುವುದಲ್ಲದೆ, CSEET ಪರೀಕ್ಷೆಯಲ್ಲಿ 34 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಅರ್ಹತೆಯನ್ನು ಪಡೆದುಕೊಂಡಿರುವುದು ವಾಣಿಜ್ಯ ವಿಭಾಗದ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಹತ್ತಾರು ಕ್ರೀಯಾಶೀಲ ಕಾರ್ಯಕ್ರಮಗಳೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಅವರ ಉತ್ತಮ ಭವಿಷ್ಯಕ್ಕೆ ಸಂಸ್ಥೆ ಕಾರಣವಾಗಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ ಈ ಉಚಿತ ಶಿಕ್ಷಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : +919980924567












