ಕಾರ್ಕಳ: ಪುರಸಭಾ ಮಾಜಿ ಅಧ್ಯಕ್ಷ, ಶಿರ್ಡಿ ಸಾಯಿ ಕಾಲೇಜಿನ ಸಂಸ್ಥಾಪಕ ಚಂದ್ರಹಾಸ ಸುವರ್ಣ ನಿಧನ

ಕಾರ್ಕಳ: ಪುರಸಭಾ ಮಾಜಿ ಅಧ್ಯಕ್ಷ, ಶಿರ್ಡಿ ಸಾಯಿ ಕಾಲೇಜಿನ ಸಂಸ್ಥಾಪಕ ಚಂದ್ರಹಾಸ ಸುವರ್ಣ (68 ವ) ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಚಂದ್ರಹಾಸ ಸುವರ್ಣ ಅವರು ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಚಂದ್ರಹಾಸ ಸುವರ್ಣರು ಲಯನ್ಸ್‌, ಜೇಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಶಿರ್ಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರರಾಗಿ, ಕಲಾ ರಂಗ ಸಂಸ್ಥಾಪಕರಾಗಿದ್ದರು. ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಪುರಸಭಾ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಸಮಾಜವಾದಿ ಪಕ್ಷ ಸೇರಿದಂತೆ ಎಲ್ಲ ಪಕ್ಷದಲ್ಲೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಲಲಿತಾ, ಪುತ್ರ ಅಭಿಷೇಕ್‌ ಹಾಗೂ ಪುತ್ರಿಯನ್ನು ಅಗಲಿದ್ದಾರೆ.