ಕಾರ್ಕಳ: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಫ್ತಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರೂ 01.00 ಕೋಟಿ ಅನುದಾನ ಮಂಜೂರಾಗಿದ್ದು ಸದರಿ ಅನುದಾನಕ್ಕೆ ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿರುತ್ತದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ರೈತರಿಗೆ, ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಹಳ್ಳ ತೋಡುಗಳನ್ನು ದಾಟಿ ಸಂಚರಿಸುವಂತ ಪರಿಸ್ಥಿತಿ ಕೆಲವೆಡೆ ಇರುತ್ತದೆ. ಇಂತಹ ಪ್ರದೇಶಗಳಲ್ಲಿ ರೈತರು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಮತ್ತು ರೈತರು ತಮ್ಮ ಕೃಷಿಗೆ ಸಂಭಂದಿಸಿದ ಯಂತ್ರೋಪಕರಣಗಳನ್ನು ಸಾಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾಲು ಸಂಕಗಳ ನಿರ್ಮಾಣಕ್ಕೆ ನಮ್ಮ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಹಾಗೂ ಹಲವು ಬಾರಿ ಮೌಕಿಕವಾಗಿ ಮನವಿ ಮಾಡಲಾಗಿತ್ತು.
ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 01 ಕೋಟಿ ರೂ ಅನುದಾನ ಮಂಜೂರಾಗಿ ಸದ್ರಿ ಕಾಲು ಸಂಕಗಳ ನಿರ್ಮಾಣ ಕಾರ್ಯಕ್ಕೆ ದಿನಾಂಕ 31-12-2025 ರಂದು ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ವಿಕಾಸ ಶಾಸಕರ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















