ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾವು ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾಣಿಜ್ಯ ವಿಭಾಗದ 6 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮೀಡಿಯೆಟ್ ಹಂತಕ್ಕೆ ಅಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಸಾತ್ವಿಕ್ ಪ್ರಭು (342/400), ರಶ್ಮಿತಾ (234/400), ಶೆಟ್ಟಿ ಪ್ರೀತೇಶ್ (227/400), ರಾಹುಲ್ (216/400), ಛಾಯ.ಸಿ.ಪೈ (215/400), ಶ್ರೀನಿಧಿ ಭಟ್(200/400) ಅಂಕ ಗಳಿಸಿರುತ್ತಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.












