ಉಡುಪಿ, ಮೇ 25: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಕಾರ್ಕಳ ಬಸ್ ನಿಲ್ದಾಣ ಮತ್ತು ಕೋರ್ಟ್ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 44 ಪ್ರಕರಣ ದಾಖಲಿಸಿ 5000 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಈ ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು.
ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ, ಕೃಷ್ಣಾನಂದ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಕಾರ್ಕಳ ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ಭಟ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿದ್ದಪ್ಪ, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಶಿಜಿನಿ, ಆರತಿ ರಾಜೀವ್, ಹೆಬ್ರಿ ಪೋಲೀಸ್ ಠಾಣೆಯ ಆರಕ್ಷಕರು, ವಾಹನ ಚಾಲಕರಾದ ಪ್ರಸಾದ್ ಹಾಗೂ ಸತೀಶ್ ಉಪಸ್ಥಿತರಿದ್ದರು.