ಕೆಸಿಇಟಿ ಇಂಜಿನಿಯರಿಂಗ್ ನಲ್ಲಿ ಜ್ಞಾನಸುಧಾದ ಸ್ತುತಿಗೆ 40ನೇ ರ‍್ಯಾಂಕ್; ಜಿಲ್ಲೆಗೆ ಪ್ರಥಮ ಸ್ಥಾನ

ಕಾರ್ಕಳ : ಕೆಸಿಇಟಿ ಇಂಜಿನಿಯರಿಂಗ್ 2022ರ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕು. ಸ್ತುತಿ ಎಸ್, ಕೆಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 40ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಈ ವರ್ಷ ರಾಜ್ಯದಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆದಿದ್ದು, ಇದರಲ್ಲಿಇವಳ ಸಾಧನೆಯು ಶ್ಲಾಘನೀಯ ಸಂಗತಿಯಾಗಿದೆ.

ಈಕೆಯು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳಿಸಿ, 593 ಅಂಕಗಳೊಂದಿಗೆ ರಾಜ್ಯಕ್ಕೆ 6 ನೇ ರ‍್ಯಾಂಕ್, ಕಾಮೆಡ್-ಕೆ 2022 ರಲ್ಲಿ ರಾಷ್ಟ್ರಮಟ್ಟದಲ್ಲಿ 85ನೇ ರ‍್ಯಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆ.ಇ.ಇ.ಮೈನ್ ಮೊದಲ ಹಂತದ ಪರೀಕ್ಷೆಯಲ್ಲಿ 99.16 ಪರ್ಸೆಂಟೈಲ್ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.

ಸ್ತುತಿಯ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಶ್ಲಾಘಿಸಿದ್ದಾರೆ.