ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ‘ಜ್ಞಾನಸಂಭ್ರಮ’ಕ್ಕೆ ಚಾಲನೆ

ಗಣಿತ ನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಜ್ಞಾನ ಸಂಭ್ರಮ -2022’ಅನ್ನು ಹಿರಿಯರಾದ ದೇಜು ಮೈಂದನ್ ಕೊಡವೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಯಲ್ಲಿ ನಾಡು, ನುಡಿ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಪರಿಚಯಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಆಟ-ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ನೀಡುವ ಸಾಂಸ್ಕೃತಿಕ ಪ್ರೋತ್ಸಾಹದ ಕಾರ್ಯವು ಶ್ಲಾಘನೀಯ ಎನ್ನುತ್ತಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಸಂದರ್ಭ ವೇದಿಕೆಯಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿ ಶ್ರೀಮತಿ ವಿದ್ಯಾವತಿ.ಎಸ್.ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪಿ.ಯು ಕಾಲೇಜಿನ ಪ್ರಾಂಶುಪಾಲ ದಿನೇಶ್. ಎಂ. ಕೊಡವೂರ್, ಉಡುಪಿ ಜ್ಞಾನಸುಧಾ ಪಿ.ಯು ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ಡೀನ್ ಸ್ಟೂಡೆಂಟ್ಸ್ ಅಫೇರ್ಸ್ ಶಕುಂತಲಾ.ಎಂ.ಸುವರ್ಣ, ಹಿತೈಷಿ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.