ಕಾರ್ಕಳ: ಇಲ್ಲಿನ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶ್ರೀಜಾ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ನಡೆಸುವ ರಾಷ್ಟ್ರ ಮಟ್ಟದ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿಉತ್ತೀರ್ಣರಾಗಿ, ಸಿಎಸ್ ಎಕ್ಸಿಕ್ಯುಟಿವ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ. ಈಕೆ ಮಿಯಾರು ಕುಂಟಿಬೈಲು ನಿವಾಸಿ ಪ್ರಶಾಂತ್ ಶೆಟ್ಟಿ ಹಾಗೂ ಶರ್ಮಿಳಾ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿಅತ್ಯಂತ ಮಹತ್ವ ಹೊಂದಿರುವ ಸಿಎಸ್ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಬಹುರಾಷ್ಟ್ರೀಯ ಕಂಪೆನಿಗಳ ಸಿ.ಇ.ಒ ಮತ್ತು ಉನ್ನತ ಹುದ್ದೆಗಳಿಗಳಲ್ಲಿ ಉತ್ತಮ ಅವಕಾಶ ಇರುತ್ತದೆ.