ಕಾರ್ಕಳ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದಾದ್ಯಂತ ಈಗಾಗಲೇ ಹಲವು ಭಾರಿ ಪ್ರವಾಸ ಮಾಡಿದ್ದು, ಬಿಜೆಪಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.
ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರು ಮತ್ತೊಮ್ಮೆ ಸಂಸದರಾಗಲಿದ್ದು, 2 ಲಕ್ಷಕ್ಕೂ ಅಧಿಕ ಮತಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಕಾರ್ಕಳ ಕ್ಷೇತ್ರವೊಂದರಲ್ಲೇ ಸುಮಾರು 50 ಸಾವಿರಕ್ಕೂ ಅಧಿಕ ಬಹುಮತ ಬರಲಿದೆ ಎಂದು ಕ್ಷೇತ್ರಾಧ್ಯಕ್ಚ ಮಣಿರಾಜ್ ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.