ಕಾರ್ಕಳ: ಹೂಳು ತೆಗೆಯಲು ಬಾವಿಗಿಳಿದ ಮೂವರು ಕಾರ್ಮಿಕರ ಪೈಕಿ ಓರ್ವ ಉಸಿರುಗಟ್ಟಿ ಮೃತಪಟ್ಟಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡ ಘಟನೆ ಕಾರ್ಕಳ ತಾಲೂಕಿನ ಬೈಲೂರು ಬಳಿ ನಡೆದಿದೆ.
ಮೃತನನ್ನು ಮೂಡುಬಿದಿರೆ ಕೋಟೆಬಾಗಿಲು ನಿವಾಸಿ ಮಣಿ (24) ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.