ಕಾರ್ಕಳ: ಮೆಸ್ಕಾಂ ಅಧಿಕಾರಿ ಗಿರೀಶ್ ರಾವ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಉಡುಪಿ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸುವ ಮೂಲಕ ಕಾರ್ಕಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಕಳ ನಗರ ಪುಕ್ಕೇರಿಯಲ್ಲಿರುವ ಅವರ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.