ಕಾರ್ಕಳ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ವಿದ್ಯಾರ್ಥಿ ನೇಣಿಗೆ ಶರಣು

ಕಾರ್ಕಳ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಾರದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿಯೊಬ್ಬ (16) ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಹವಾಲ್ದಾರ್‌ಬೆಟ್ಟು ಎಂಬಲ್ಲಿ ಇಂದು ನಡೆದಿದೆ.

ಮೃತ ಬಾಲಕನನ್ನು ನಿವೃತ್ತ ಸೈನಿಕ ಸನತ್‌ ಕುಮಾರ್‌ ಅವರ ಪುತ್ರ ಎಂದು ಗುರುತಿಸಲಾಗಿದೆ. ಈತ ಕಾರ್ಕಳ ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದನು. ಈತನಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 77ರಷ್ಟು ಫಲಿತಾಂಶ ಬಂದಿತ್ತು. ಆದರೆ ಆತ ಅದಕ್ಕಿಂತ ಹೆಚ್ಚಿನ ಅಂಕದ ನಿರೀಕ್ಷಿಸಿದ್ದನು ಎನ್ನಲಾಗಿದೆ. ಇದೇ ವಿಷಯದಿಂದ ಮನನೊಂದು ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.