Home » ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಕಾರ್ಕಳ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭುವನೇಂದ್ರ ಕಾಲೇಜಿನ ಬಿಸಿಎ ವಿದ್ಯಾರ್ಥಿ ಸಾಣೂರು ನಿವಾಸಿ ವಿಘ್ನೇಶ್ ಆಚಾರ್ಯ (20) ಭಾನುವಾರ ಮೃತಪಟ್ಟಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಘ್ನೇಶ್, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇವರು ಸಾಣೂರು ಶ್ರೀಧರ ಆಚಾರ್ಯ ಅವರ ಪುತ್ರ.