ಕಾರ್ಕಳ: ಬಿಜೆಪಿ ಯುವಮೋರ್ಚಾ ಕಾರ್ಕಳ ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಕಾರ್ಕಳ ಶ್ರೀ ಮಂಜುನಾಥ ಪೈ ಸಭಾಂಗಣದಲ್ಲಿ ಜನವರಿ 14ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಿಜೆಪಿ ಕಾರ್ಕಳ ಯುವಮೋರ್ಚಾದ ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಬಿಜೆಪಿ ಕಾರ್ಕಳ ಯುವಮೋರ್ಚಾದ ಮಂಡಲ ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲ್ಯಾನ್ ಮತ್ತು ಭರತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.