ಬೆಳ್ಮಣ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಹಶೀಲ್ದಾರರು ಕಂದಾಯ ಅಧಿಕಾರಿಗಳೊಂದಿಗೆ ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂಡ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಸೂಡ ಗ್ರಾಮದ ಗ್ರಾಮಸ್ಥರು ಕಂದಾಯ, ಪಂಚಾಯತ್ ರಾಜ್, ಆಹಾರ, ಸರ್ವೇ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಅದನ್ನು ನೀಡಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಹಾಗೂ ಸದ್ರಿ ಇಲಾಖೆಗಳಡಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಮಾಹಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದ್ದು, ಗ್ರಾಮಸ್ಥರು ಸದ್ರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.