ಕಾರ್ಕಳ: ಮೂರನೇ ಆದಿಗ್ರಾಮೋತ್ಸವ; ಗ್ರಾಮ ಸಾಹಿತ್ಯ ಸಮ್ಮೇಳನ

ಕಾರ್ಕಳ: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಸಮಿತಿ, ಕರ್ನಾಟಕ ಸಾಹಿತ್ಯ ಪರಿಷತ್ತು ಅಜೆಕಾರು ಹೋಬಳಿ, ಲಯನ್ಸ್ ಕ್ಲಬ್ ಮುನಿಯಾಲು, ದುರ್ಗಾಪರಮೇಶ್ವರಿ ಭಜನಾಮಂಡಳಿ ಸಿರಿಬೈಲು ಇದರ ಸಹಯೋಗದೊಂದಿಗೆ
ಮೂರನೇ ಆದಿಗ್ರಾಮೋತ್ಸವ; ಗ್ರಾಮ ಸಾಹಿತ್ಯ ಸಮ್ಮೇಳನ ಕಡ್ತಲ ಸಿರಿಬೈಲಿನ ಬರ್ಬರೇಶ್ವರ ದುರ್ಗಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಇಂದು ನಡೆಯಿತು.

ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಸಮ್ಮೇಳನವನ್ನು ಉದ್ಘಾಟಿಸಿದರು.
ಸಾಹಿತಿ ಮೌರಿಸ್ ತಾವ್ರೊ ಅಜೆಕಾರು ಸಮ್ಮೇಳನದ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ಆಂಗ್ಲ ಮಾಧ್ಯಮದ ಮಕ್ಕಳು ಕನ್ನಡ ಮಾಧ್ಯಮದ ಮಕ್ಕಳೊಂದಿಗೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ, ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸಂಘಜೀವಿಯಾದ ಮಾನವ ಸಹೋದರತೆ, ಸೌಹಾರ್ದತೆಯಿಂದ ಬಾಳಬೇಕು ಎಂದರು.

ನಿವೃತ್ತ ಶಿಕ್ಷಣ ಇಲಾಖೆಯ ಪರಿವೀಕ್ಷಕ ಕರುಣಾಕರ್ ಹೆಗ್ಡೆ , ಅಂತರರಾಷ್ಟ್ರೀಯ ಯೋಗ ಸಾಧಕ ಶೇಖರ್ ಕಡ್ತಲ, ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಬಿ. ಜಗದೀಶ್, ಸಾಹಿತಿ ಪ್ರೇಮ ವಿ. ಸೂರಿಗ ಮೊದಲದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಶೇಖರ್ ಅಜೆಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಮಠದಬೆಟ್ಟು ಸ್ವಾಗತಿಸಿದರು. ದೀಪಕ್ ಕಾರ್ಯಕ್ರಮ ನಿರೂಪಿಸಿದರು.