ಕಾರ್ಕಳ: ನಗರದ ಸರ್ವಜ್ಞ ಸರ್ಕಲ್‌ನಿಂದ ನಕ್ರೆಯ ಕಡೆಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹ ಸವಾರೆ ಕುಕ್ಕುಂದೂರು ಗ್ರಾಮದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವಿಗೀಡಾಗಿದ್ದಾರೆ. ಜಯಲಕ್ಷ್ಮಿ ಮೃತಪಟ್ಟವರು.
ಅವರ ತಲೆ ಹಾಗೂ ಇನ್ನಿತರ ಕಡೆಗಳಲ್ಲಿ ಗಂಭೀರ ಗಾಯಗಳಾಗಿದ್ದವು. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















