ಕಾರ್ಕಳ: ನಾಡಕೋವಿಯಿಂದ ಗುಂಡಿಕ್ಕಿಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಇಂದು ನಡೆದಿದೆ.
ಕುಂಟಾಡಿಯ ಅಡ್ಕುಂಜ ವಿಶಾಕ್ ಪೂಜಾರಿ (30) ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ತೋಟಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.