ಉಡುಪಿ, ಜೂನ್ 14: ಮುಂಗಾರು ಮಳೆ ಪ್ರಾರಂಭವಾಗಿರುವುದರಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ನಡೆಸುವವರು ರಸ್ತೆ ಹಾಗೂ ಚರಂಡಿಗಳ ಮೇಲೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ಸಂಗ್ರಹಿಸಿಡುವುದರಿಂದ ಮಳೆ ನೀರು ಹರಿದು ಹೋಗಲು ತೋದರೆಯಾಗುತ್ತಿದ್ದು, ಸಾರ್ವಜನಿಕ ರಸ್ತೆ ಹಾಗೂ ಚರಂಡಿ ಮೇಲೆ ಯಾವುದೇ ಕಟ್ಟಡ ಸಾಮಾಗ್ರಿಗಳನ್ನು ಸಂಗ್ರಹಿಸಿದ್ದರೆ ತಕ್ಷಣ ತೆರವುಗೊಳಿಸುವಂತೆ ಸೂಚಿಸಲಾಗಿದೆ.
ಮಳೆಗಾಲ ಮುಗಿಯುವವರೆಗೆ ರಸ್ತೆ ಮೇಲೆ ಸಾಮಾಗ್ರಿಗಳನ್ನು ಸಂಗ್ರಹಿಸದಂತೆ ಮತ್ತು ಹಾಕಿ ಸಂಗ್ರಹಿಸಿದ್ದಲ್ಲಿ ಪುರಸಭೆ ಯಾವುದೇ ಸೂಚನೆ ನೀಡದೇ ತೆರವುಗೊಳಿಸಿ, ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಕಳ ಪುರಸಬೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












