ಮರವಂತೆ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ

ಕುಂದಾಪುರ: ಮರವಂತೆ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಬುಧವಾರದಂದು ಕರ್ಕಾಟಕ ಅಮಾವಾಸ್ಯೆ ಜಾತ್ರೆ ನಡೆಯಿತು. ಅಂದು ಬೆಳಗ್ಗಿನ ಜಾವದಿಂದಲೇ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಪಾಲ್ಗೊಂಡರು.

ಭಕ್ತರು ಸಮುದ್ರ ಸ್ನಾನ ನೆರವೇರಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಜಾತ್ರೆಯ ಪ್ರಯುಕ್ತ ದೇವಾಲಯವನ್ನು ಹೂವುಗಳಿಂದ ಸುಂದರವಾಗಿ ಸಿಂಗರಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಮಾತು ಸ್ವಯಂಸೇವಕರು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ದೇವರ ದರ್ಶನದ ವ್ಯವಸ್ಥೆ ಮಾಡಿದರು.

ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಕೃತಾರ್ಥರಾದರು. ಸುರಕ್ಷತೆಗಾಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು.