ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು 9 ದಿನಗಳಲ್ಲೇ ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಅವರು ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ಸಿಎಂ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ನೆಗೆಟಿವ್ ದೃಢಪಟ್ಟಿತ್ತು. ಹಾಗಾಗಿ ಆಸ್ಪತ್ರೆಯ ವೈದ್ಯರ ಬಳಿ ಸಮಾಲೋಚನೆ ನಡೆಸಿ ಇಂದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಲು ತೀರ್ಮಾನಿಸಿದ್ದರು. ಅದರಂತೆ ಇದೀಗ ಡಿಸ್ಚಾರ್ಜ್ ಆಗಿ ಮನೆ ತೆರಳಿದ್ದು, ಮನೆಯಲ್ಲಿಯೇ ಕೆಲ ದಿನ ಹೋಮ್ ಕ್ವಾರಂಟೈನ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಅವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಿಎಂ ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಸಿಎಂ ಆಸ್ಪತ್ರೆಗೆ ದಾಖಲಾಗಿ ನಾಳೆಗೆ ಹತ್ತು ದಿನಗಳು ಆಗಲಿದೆ. ಆದರೆ ಸಿಎಂ ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆ 9 ದಿನದಲ್ಲಿಯೇ ಡಿಸ್ಚಾರ್ಜ್ ಆಗಿದ್ದಾರೆ.