ಕರ್ನಾಟಕ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಪ್ರಕಟ?

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇದೇ ಏ.8 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ 7ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದ್ದು, ಅವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.