ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿ ತಮಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ ಎಂದು ತಿಳಿಸಿದ್ದು, ಸೂಕ್ತ ಚಿಕಿತ್ಸೆ ಪಡೆದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹಾಗೂ ತಮ್ಮ ಪತ್ನಿ ಪಲ್ಲವಿ, ಸಿಬ್ಬಂದಿ ವರ್ಗ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿಲ್ಲ ಎಂದವರು ಹೇಳಿದರು.