ಬೆಂಗಳೂರು: ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಕೆ.ಎ.ಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಶನಿವಾರ ನೆರವೇರಿತು.
ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಿಕಲಚೇತನ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಎಚ್.ವಿ. ಗೋಪಾಲಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಕಲಚೇತನರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.
ನೂತನವಾಗಿ ರಾಜ್ಯ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು.
ಪ್ರಧಾನ ಕಾರ್ಯದರ್ಶಿ ಡಾ. ವಸಂತ್ ಕುಮಾರ್ ಶೆಟ್ಟಿ, ರಾಜ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಕೋಶಾಧಿಕಾರಿ ಕರೆಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಇಲಾಖೆಯ ನಿರ್ದೇಶಕರನ್ನು ಕ.ರಾ.ವಿ.ಶಿಕ್ಷಕರ ಸಂಘಟನೆಯ ವತಿಯಿಂದ ಗೌರವಿಸಲಾಯಿತು.