ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ. 71.80 ರಷ್ಟು ಫಲಿತಾಂಶ: ಚಿಕ್ಕಬಳ್ಳಾಪುರ ಫಸ್ಟ್, ಯಾದಗಿರಿ ಲಾಸ್ಟ್

ಬೆಂಗಳೂರು: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಸಕ್ತ ವರ್ಷ ಶೇ. 71.80 ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ 8,11,050 ವಿದ್ಯಾರ್ಥಿಗಳ ಪೈಕಿ 5,82,316 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಈ ಬಾರಿ ಚಿಕ್ಕಬಳ್ಳಾಪುರ ಪ್ರಥಮ ಸ್ಥಾನ ಪಡೆದಿದೆ. ಬೆಂಗಳೂರು ಗ್ರಾಮಾಂತರ ಎರಡು ಹಾಗೂ‌ ಮಧುಗಿರಿ ಮೂರನೇ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಗಳಿಸಿದೆ.
ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು  625ಕ್ಕೆ 625 ಅಂಕ ಪಡೆದಿದ್ದಾರೆ. 11 ವಿದ್ಯಾರ್ಥಿಗಳು 624 ಅಂಕಗಳನ್ನು ಪಡೆದಿದ್ದಾರೆ.