ಉಡುಪಿ: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ ಭಂಡಿವಾಡ್ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನ ವರದರಾಜ ಭಟ್ ಅಧ್ಯಕ್ಷರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಕೇಂದ್ರ ಕಛೇರಿಯ ಮುಖ್ಯ ಪ್ರಬಂಧಕ ಉಲ್ಲಾಸ್ ಗುನಗಾ ಹಾಗೂ ಉಡುಪಿ ಶಾಖೆಯ ಪ್ರಬಂಧಕ ರಾಘವೇಂದ್ರ ಉಪಾಧ್ಯ ಉಪಸ್ಥಿತರಿದ್ದರು.