ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ್ಕದಲ್ಲಿ ಅತ್ಯಂತ ಬಲಿಷ್ಠ ವಾಗಿದ್ದ ಕಾಂಗ್ರೆಸ್ ಈ ಲೋಕಸಭಾ ಚುಣಾವಣೆಯಲ್ಲಿ ಮಕಾಡೆ ಮಲಗಿದೆ. ಹೀಗಾಗಿ ಕಾಂಗ್ರೆಸ್ ಮಾತ್ರವಲ್ಲದೇ ಆಡಳಿತ ನಡೆಸುತ್ತಿರುವ ದೋಸ್ತಿ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ.
ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಗೆಲುವಿನ ಸನಿಹದಲ್ಲಿದೆ. 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಖಚಿತಗೊಂಡಿದೆ. ಬಿಜೆಪಿ ಅಲೆಯಿಂದಾಗಿ ಕರ್ನಾಟಕದಲ್ಲಿ ಪ್ರಮುಖ ನಾಯಕರೇ ಸೋಲೊಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಕೇವಲ ಒಂದೊಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಗೆಲುವಿನ ಭರವಸೆ ಮೂಡಿಸಿದೆ. ಭಾರೀ ಕುತೂಹಲ ಮೂಡಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅವರು ಭಾರೀ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.
ಕಾಂಗ್ರೆಸ್ ಪ್ರಮುಖ ಹಿರಿಯ ನಾಯಕರಾದ ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಅವರು ಸೊಲೊಪ್ಪಿಕೊಳ್ಳುವಂತಾಗಿದೆ. ಅಲ್ಲದೇ ಮಾಜಿ ಪ್ರಧಾನಿ ಜೆಡಿಎಸ್ ನ ದೇವೇಗೌಡ ಅವರು ಕೂಡ ಸೋಲೊಪ್ಪಿಕೊಂಡಿದ್ದಾರೆ.