ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಿನ್ನೆ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಲಿಯಾದ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಮುಖ್ಯಸ್ಥರು ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿನ ಪೋಸ್ಟ್‌ನಲ್ಲಿ, ‘ತಾನು ದುಃಖದಿಂದ ಮುಳುಗಿದ್ದೇನೆ. ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಾಲುತ್ತಿಲ್ಲ. ನನ್ನ ಕಣ್ಣುಗಳು ಮತ್ತು ಮನಸ್ಸು ದುಃಖದಿಂದ ಆವೃತವಾಗಿವೆ. ನಾನು ಭೇಟಿಯಾದ ನಿಮ್ಮೆಲ್ಲರ ಮುಖಗಳು ನನ್ನ ಮನಸ್ಸಿನಲ್ಲಿ ಮಿನುಗುತ್ತಲೇ ಇರುತ್ತವೆ. ಪ್ರೀತಿ ಮತ್ತು ಕಾಳಜಿಯನ್ನು ತೋರಿಸುವ ನನ್ನ ಪ್ರೀತಿಪಾತ್ರರ ಬಗ್ಗೆ ಹೆಚ್ಚು ಯೋಚಿಸುತ್ತಿದ್ದಂತೆ, ನನ್ನ ಹೃದಯ ಭಾರವಾಗುತ್ತದೆ’ ಎಂದು ಅವರು ಹೇಳಿದರು.
‘ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ನಿಮಗೆ ನೋವಿನೊಂದಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತಾ, ನಾನು ನಿಮ್ಮ ಹೃದಯಗಳಿಗೆ ಹತ್ತಿರವಾಗಿ ನಿಂತು ಈ ಅಪಾರ ದುಃಖವನ್ನು ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ಸರಿಪಡಿಸಲಾಗದ ನಷ್ಟ. ಯಾರು ಸಾಂತ್ವನದ ಮಾತುಗಳನ್ನು ಹೇಳಿದರೂ, ನಮ್ಮ ಪ್ರೀತಿಪಾತ್ರರ ನಷ್ಟ ಅಸಹನೀಯ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳನ್ನು ಮತ್ತು ಗಾಯಗೊಂಡು ಚಿಕಿತ್ಸೆ 2 ಲಕ್ಷ ರೂಪಾಯಿಗಳನ್ನು ನೀಡಲು ನಾನು ನಿರ್ಧರಿಸಿದ್ದೇನೆ’ ಎಂದು ಟಿವಿಕೆ ಮುಖ್ಯಸ್ಥರೂ ಆಗಿರುವ ವಿಜಯ್ ತಿಳಿಸಿದ್ದಾರೆ.
ಮೃತ ಕುಟುಂಬಕ್ಕೆ 2 ಲಕ್ಷ ರೂ. & ಗಾಯಾಳುಗಳಿಗೆ ತಲಾ 50,000 ರೂ.: ಮೋದಿ
ಇನ್ನೂ ಈ ಕಾಲ್ತುಳಿತದಲ್ಲಿ ಮೃತಪಟ್ಟ 39 ಮಂದಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000ರೂ. ನೀಡುವುದಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.


















