ಕಟಪಾಡಿ: ₹22.72 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ; ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ‌ ಕಾಪು ತಾಲೂಕಿನ ಕಟಪಾಡಿ ಪ್ರದೇಶದಲ್ಲಿ ₹22.72 ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ (ಓವರ್ ಪಾಸ್) ಅನಿವಾರ್ಯತೆಯಿದೆ ಎಂದು ಕೇಂದ್ರ ಸಚಿವರಿಗೆ ಮನದಟ್ಟು ಮಾಡಲಾಗಿತ್ತು.

ಅದರಂತೆ ಅಂಡರ್ ಪಾಸಿನ ಬದಲು ಓವರ್ ಪಾಸ್ ನಿರ್ಮಿಸಲು ಕೇಂದ್ರ ತಾತ್ವಿಕ ಅನುಮೋದನೆ ನೀಡಿದೆ. ಇದರಿಂದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಸಹಕಾರಿಯಾಗಲಿದೆ ಎಂದರು.

ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರು ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಯೋಜನೆಯ ಪೂರ್ಣ ವಿವರಗಳು ಲಭ್ಯವಾಗಳಿವೆ ಎಂದರು.