ಕಾಪು: ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿ ಭೂಮಿಪೂಜೆ

ಉಡುಪಿ: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಲಾಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಉಪಸ್ಥಿತರಿದ್ದರು.