ಉಡುಪಿ: ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ಮಜೂರು ಎಂಬಲ್ಲಿ ಭಾನುವಾರ ಬೆಳಿಗ್ಗೆ ಬೆಂಕಿ ಹತ್ತಿಕೊಂಡಿದ್ದ ಶವವೊಂದು ಪತ್ತೆಯಾಗಿದ್ದು ಸ್ಥಳಿಯರ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಬೆಳಿಗ್ಗೆ ೯ ಗಂಟೆಗೆ ಮಜೂರು ರೇಲ್ವೆ ಬ್ರಿಡ್ಜ್ ಪಕ್ಕದ ಪೊದೆಯಲ್ಲಿ ಈ ಶವ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೋಲಿಸರು ಬೆಂಕಿಯನ್ನು ನಂದಿಸಿದರು. ಆದರೇ ಅದಾಗಲೇ ಗಂಡಸಿನ ಶವ ಗುರತು ಸಿಗದಷ್ಟು ಸುಟ್ಟ ಹೋಗಿತ್ತು. ಶವವನ್ನು ಹೆಚ್ಚಿನ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ವ್ಯಕ್ತಿ ತಾನೇ ಬೆಂಕಿ ಹಚ್ಚಿಕೊಂಡು ಸತ್ತನೋ ಅಥವಾ ಯಾರಾದರೋ ಕೊಲೆ ಮಾಡಿ ಬೆಂಕಿ ಹಚ್ಚಿದರೋ ಇನ್ನಷ್ಟೇ ತನಿಖೆಯಿಂದ ಬಹಿರಂಗವಾಗಬೇಕಾಗಿದೆ.