ಕುಂದಾಪುರ: ಕೆರಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸಮಾನ ಮತ ಬಿದ್ದ ಹಿನ್ನೆಲೆಯಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ.ಆರ್. ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.
14 ಸದಸ್ಯ ಬಲದ ಕೆರಾಡಿ ಗ್ರಾಪಂನಲ್ಲಿ 8 ಬಿಜೆಪಿ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಮತದಾನದ ವೇಳೆ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಕಾಂಗ್ರೆಸ್‌ಗೆ ಮತ ಹಾಕಿದ ಪರಿಣಾಮ ಇಬ್ಬರೂ ತಲಾ 7 ಸಮಾನ ಮತಗಳನ್ನು ಪಡೆದರು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ಗಿರಿಜಾ ಶೆಟ್ಟಿ ಆಯ್ಕೆಯಾದರು.