ಕೇರಳಕ್ಕೆ ಪಡಿತರ ಅಕ್ಕಿ ಸಾಗಿಸುತ್ತಿದ್ದ ಐವರು ಚೋರರ ಬಂಧನ: 55 ಟನ್ ಅಕ್ಕಿ‌ ವಶ

ಉಡುಪಿ: ಕೇರಳಕ್ಕೆ ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಐವರು ಚೋರರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ ಹಾಗೂ ನಿಯಾಸ್ ಎಂದು ಗುರುತಿಸಲಾಗಿದೆ. ಬಂಧಿತರು ಕುಂದಾಪುರ ಮೂಡು ಗೋಪಾಡಿ ಮತ್ತು ಕೇರಳ ಮೂಲದವರೆಂದು ತಿಳಿದುಬಂದಿದೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಡಿಸಿಐಬಿ ಪೊಲೀಸರು, ಆರೋಪಿಗಳು ಕುಂದಾಪುರ ತಾಲೂಕಿನ ಕೋಟೇಶ್ವರದ ಅಕ್ರಮ ಅಕ್ಕಿ ದಾಸ್ತಾನು ಗೋಡಾನ್ ನಲ್ಲಿ ಸಂಗ್ರಹಿಸಿ ಇಟ್ಟಿದ್ದ 55 ಟನ್ ಕಿಲೋ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಕಿ ತುಂಬಿ ಕೇರಳಕ್ಕೆ ಹೊರಟಿದ್ದ ಲಾರಿ, 2.75 ಲಕ್ಷ ರೂಪಾಯಿ ನಗದು, ಮೂರು ಕಾರು ಸುಮಾರು ಒಂದು ಕೋಟಿ ರುಪಾಯಿ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.