ಪಾಕ್​ ಗಡಿಯಿಂದ ಉಗ್ರರ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರ ಉಗ್ರರ ಹತ್ಯೆ

ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಉಗ್ರರು ನುಸುಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಕುಪ್ವಾರ ಜಿಲ್ಲೆಯ ಮಚ್ಚಲ್​ ಸೆಕ್ಟರ್​ನಲ್ಲಿ ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇನ್ನಷ್ಟು ಉಗ್ರರು ನುಸುಳುತ್ತಿರುವ ಮಾಹಿತಿಯ ಮೇಲೆ ಕಾರ್ಯಾಚರಣೆ ಮುಂದುವರಿಸಲಾಗಿದೆ.ಪಾಕ್​ ಗಡಿಯಿಂದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.

ಉಗ್ರರ ಗಡಿ ನುಸುಳುವಿಕೆಯ ಬಗ್ಗೆ ಮುಂಜಾನೆ ಮಾಹಿತಿ ತಿಳಿದ ತಕ್ಷಣ ಜಾಗೃತಗೊಂಡ ಸೇನೆ, ಕುಪ್ವಾರ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿತು. ಈ ವೇಳೆ ಗುಂಡಿನ ಚಕಮಕಿಯೂ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.ಉಗ್ರರನ್ನು ಹತ್ಯೆ ಮಾಡಿದ್ದರ ಬಗ್ಗೆ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಲ್ ಸೆಕ್ಟರ್‌ನಲ್ಲಿ ಗುರುವಾರ ಭಯೋತ್ಪಾದಕರು ಗಡಿ ನುಸುಳಲು ಯತ್ನಿಸುತ್ತಿದ್ದಾಗ, ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೋಸ್ಟ್​ ಮಾಡಿದ್ದಾರೆ.
.